ಜಮಾಅತೆ ಇಸ್ಲಾಮೀ ಹಿಂದ್‌ನ ನಿಯೋಗದಿಂದ ಶ್ರೀ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳನ್ನು ಭೇಟಿ

October 27, 2026

ಧಾರ್ಮಿಕ ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಜಮಾಅತೆ ಇಸ್ಲಾಮೀ ಹಿಂದ್‌ನ ಉನ್ನತ ಮಟ್ಟದ ನಿಯೋಗವು ಶ್ರೀ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು.

ಜಮಾಅತೆ ಇಸ್ಲಾಮೀ ಹಿಂದ್‌ನ ರಾಷ್ಟ್ರೀಯ ಉಪಾಧ್ಯಕ್ಷರಾದ ಪ್ರೊ. ಸಲೀಂ ಇಂಜಿನಿಯರ್ ಹಾಗೂ ರಾಜ್ಯಾಧ್ಯಕ್ಷ ಡಾ. ಮೊಹಮ್ಮದ್ ಸಾದ್ ಬೆಳ್ಗಾಮಿ ನೇತೃತ್ವದ ಈ ನಿಯೋಗದಲ್ಲಿ ರಾಜ್ಯ ನಾಯಕರು ಉಪಸ್ಥಿತರಿದ್ದರು.

ಭೇಟಿಯ ವೇಳೆ ಸಮಾಜದಲ್ಲಿ ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಗಟ್ಟಿಗೊಳಿಸುವ ಕುರಿತು ಗಂಭೀರ ಚರ್ಚೆ ನಡೆಯಿತು. ಪರಸ್ಪರ ಬಾಂಧವ್ಯವನ್ನು ಬೆಳೆಸಿಕೊಳ್ಳುವುದು, ವಿವಿಧ ಸಮುದಾಯಗಳ ನಡುವೆ ಸಂಪರ್ಕ ಸಾಧಿಸುವುದು ಹಾಗೂ ಸಮಾಜದ ಒಳಿತಿಗಾಗಿ ಒಟ್ಟಾಗಿ ಕೈಜೋಡಿಸಿ ಕೆಲಸ ಮಾಡುವ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಈ ಸೌಹಾರ್ದಯುತ ಭೇಟಿಯು ರಾಜ್ಯದ ಸೌಹಾರ್ದ ಪರಂಪರೆಯನ್ನು ಇನ್ನಷ್ಟು ಗಟ್ಟಿಗೊಳಿಸಲು ಸ್ಫೂರ್ತಿಯಾಗಲಿ.

You May Also Like…

No Results Found

The page you requested could not be found. Try refining your search, or use the navigation above to locate the post.

0 Comments

Submit a Comment